ಮನೆ ಅಪರಾಧ ಕಾಶ್ಮೀರದ ಪಹಾಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣ : ಸುಪ್ರಿಂಕೋರ್ಟ್ ನಲ್ಲಿ PIL ಸಲ್ಲಿಕೆ

ಕಾಶ್ಮೀರದ ಪಹಾಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣ : ಸುಪ್ರಿಂಕೋರ್ಟ್ ನಲ್ಲಿ PIL ಸಲ್ಲಿಕೆ

0

ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರವಾದ ಗುಂಡಿನ ದಾಳಿ ನಡೆಸಿದ್ದಾರೆ. ಈ ಒಂದು ಗುಂಡಿನ ದಾಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು ಕರ್ನಾಟಕ ಮೂಲದ ಇಬ್ಬರು ಪ್ರವಾಸಿಗರು ಸಹ ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ಹೌದು ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂ ಕೋರ್ಟ್ ಅಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲಿನ ದಾಳಿ ಕುರಿತಂತೆ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ಇನ್ನು ಈ ಒಂದು ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಹಾಗೂ ಬೆಂಗಳೂರು ಮೂಲದ ಭರತ್ ಭೂಷಣ್ ಅವರು ಬಲಿಯಾಗಿದ್ದಾರೆ. ಇದೀಗ ರಾಜ್ಯ ಸರ್ಕಾರ ಮೃತ ದೇಹಗಳನ್ನು ರಾಜ್ಯಕ್ಕೆ ತರುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು ನಾಳೆ ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.