Saval TV on YouTube
ಶ್ರೀನಗರ(Srinagar): ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನೆಯ ಆಸ್ಪತ್ರೆ ಬಳಿ ಉಗ್ರರು ನಡೆಸಿದ ಗುಂಡಿನ ದಾಳಿ ವೇಳೆ ಇಬ್ಬರು ಮೃತಪಟ್ಟಿದ್ದಾರೆ.
ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನೆಯ ಆಸ್ಪತ್ರೆ ಬಳಿ ಉಗ್ರರು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಸೇನಾ ಘಟಕ ‘ವೈಟ್ ನೈಟ್ ಕಾಪ್ಸ್’ ಟ್ವಿಟರ್’ನಲ್ಲಿ ಮಾಹಿತಿ ನೀಡಿದೆ.