ಮನೆ ರಾಜ್ಯ ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ: ಮುಖ್ಯಮಂತ್ರಿ ಬೊಮ್ಮಾಯಿ

ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ: ಮುಖ್ಯಮಂತ್ರಿ ಬೊಮ್ಮಾಯಿ

0

ಬೆಂಗಳೂರು (Bengaluru): ಉದಯಪುರದಲ್ಲಿ ನಡೆದಿರುವ ಹತ್ಯೆ ಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿಗಳಷ್ಟೇ ಅಲ್ಲ, ಭಯೋತ್ಪಾದಕ ಸಂಸ್ಥೆಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತಾರಾಷ್ಟ್ರೀಯ ಷಡ್ಯಂತರವಿದೆ. ಅದು ಪತ್ತೆಯಾಗಿ, ಅಪರಾಧಿಗಳನ್ನು ಗಲ್ಲಿಗೇರಿಸಬೇಕು. ರಾಜಸ್ತಾನ ಸರ್ಕಾರ ಸಂಪೂರ್ಣ ತನಿಖೆ ಕೈಗೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂದರು.

ಪ್ರಧಾನ ಮಂತ್ರಿಗಳ ನಿರ್ದೇಶನದ ಮೇರೆಗೆ ತನಿಖೆ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ದಾಖಲೆಗಳನ್ನು ಒದಗಿಸಲು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಕೊಡಲಿ ತೊಂದರೆ ಇಲ್ಲ. ಪ್ರಧಾನ ಮಂತ್ರಿಗಳ ನಿರ್ದೇಶನದ ಮೇರೆಗೆ ತನಿಖೆ ಮಾಡಲಾಗುವುದು ಎಂದರು.

ಬಿ.ಟಿ.ಲಲಿತಾ ನಾಯಕ್ ಅವರು ಪಿ ಎಸ್ ಐ ನೇಮಕಾತಿಗೆ ಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೊದಲು ತನಿಖೆಯಾಗಲಿ ಎಂದು ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ಹಿಂದಿನ ಲೇಖನಬಿಬಿಎಂಪಿ ವಾರ್ಡ್ ವಿಂಗಡಣೆ:  2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಅರ್ಜಿ
ಮುಂದಿನ ಲೇಖನಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಎಲ್.ನಾಗೇಂದ್ರ