ಶ್ರೀನಗರ (Srinagar)-ಭಾರತೀಯ ಸೇನಾಪಡೆ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಹತ್ಯೆಗೈದಿದೆ.
ಜಮ್ಮು ಮತ್ತು ಕಾಶ್ಮೀರದ (jammu-kashmir) ಕುಲ್ಗಾಂ (kulgam) ಜಿಲ್ಲೆಯ ಮಿರ್ಹಾಮಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಮೃತ ಉಗ್ರರ ಬಳಿಯಿದ್ದ ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು, 2 ಎಕೆ ರೈಫಲ್ಸ್’ಗಳು 7 ಎಕೆ ನಿಯತಕಾಲಿಕೆಗಳು, 9 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಉಗ್ರರು ಅಡಗಿ ಕುಳಿತಿರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಗುಂಡಿನ ನಡೆಸಿದರು. ಇದಕ್ಕೆ ಪ್ರತಿದಾಳಿ ನಡೆಸಿದ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತು ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಅಡಗಿ ಕುಳಿತಿದ್ದು, ಕಾರ್ಯಾಚರಣೆ ಮುಂದುವರೆದಿದೆ.