Saval TV on YouTube
ನವದೆಹಲಿ(Newdelhi): ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಅನುಭವಿ ಎಡಗೈ ಮಧ್ಯಮವೇಗಿ ಜೈದೇವ್ ಉನದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ.
ಮೊಹಮ್ಮದ್ ಶಮಿ ಕೈಗೆ ಗಾಯವಾಗಿರುವುದರಿಂದ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ಸೌರಾಷ್ಟ್ರದ ಜೈದೇವ್ ಆಯ್ಕೆಯಾಗಿದ್ದಾರೆ. ಈ ಸರಣಿಯಲ್ಲಿ ಎರಡು ಟೆಸ್ಟ್’ಗಳು ನಡೆಯಲಿವೆ.
31 ವರ್ಷದ ಜೈದೇವ್ 2010ರಲ್ಲಿ ಸೆಂಚುರಿಯನ್’ನಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಏಳು ಏಕದಿನ ಮತ್ತು 10 ಟಿ20 ಪಂದ್ಯಗಳಲ್ಲಿ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.
ದೀರ್ಘ ಕಾಲದ ನಂತರ ಅವರಿಗೆ ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಡುವ ಅವಕಾಶ ಲಭಿಸಿದೆ. ಈಚೆಗೆ ಮುಕ್ತಾಯವಾದ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಜೈದೇವ್ ನಾಯಕತ್ವದ ಸೌರಾಷ್ಟ್ರ ತಂಡವು ಚಾಂಪಿಯನ್ ಆಗಿತ್ತು. ಅದರಲ್ಲಿ ಅವರು 10 ಪಂದ್ಯಗಳಿಂದ 19 ವಿಕೆಟ್’ಗಳನ್ನು ಗಳಿಸಿದ್ದರು.