ಮನೆ ರಾಜಕೀಯ ಭ್ರಷ್ಟಚಾರದಲ್ಲಿ ಕರ್ನಾಟಕವನ್ನು ನಂ1 ಮಾಡಿದ್ದಕ್ಕೆ ಥ್ಯಾಂಕ್ಯೂ ಮೋದಿ: ಕಾಂಗ್ರೆಸ್ ವಾಗ್ದಾಳಿ

ಭ್ರಷ್ಟಚಾರದಲ್ಲಿ ಕರ್ನಾಟಕವನ್ನು ನಂ1 ಮಾಡಿದ್ದಕ್ಕೆ ಥ್ಯಾಂಕ್ಯೂ ಮೋದಿ: ಕಾಂಗ್ರೆಸ್ ವಾಗ್ದಾಳಿ

0

ಬೆಂಗಳೂರು: ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ ಥ್ಯಾಂಕ್ಯೂ ಮೋದಿ ಎಂದು  ಕಾಂಗ್ರೆಸ್ ಪಕ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ  ತೀವ್ರ ವಾಗ್ದಾಳಿ ನಡೆಸಿದೆ.

ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ ನೀಡಲಿರುವ ಮೋದಿ ಅವರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಥ್ಯಾಂಕ್ಯೂ ಮೋದಿ ಎಂಬ ಹ್ಯಾಷ್‌ ಟ್ಯಾಗ್ ಬಳಕೆ ಸರಣಿ ಟ್ವೀಟ್ ಮಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದೆ.

ಪಿಎಸ್‌ಐನಿಂದ ಹಿಡಿದು ಪೌರ ಕಾರ್ಮಿಕರ ನೇಮಕಾತಿಯವರೆಗೂ ಪ್ರತಿ ಹುದ್ದೆಗಳನ್ನೂ ರೇಟ್ ಕಾರ್ಡ್ ಹಾಕಿ ಮಾರಾಟ ಮಾಡುತ್ತಿರುವ ಬಿಜೆಪಿ ಸರ್ಕಾರದ ಸಾಧನೆ ಅಮೋಘವಾದುದು!  ಅರ್ಹತೆಯ ಆಧಾರದಲ್ಲಿ ಸಿಗುತ್ತಿದ್ದ ಉದ್ಯೋಗಗಳನ್ನ ಸುಲಭವಾಗಿ ಹಣ ಕೊಟ್ಟು ಕೊಳ್ಳುವಂತ ವ್ಯವಸ್ಥೆ ನಿರ್ಮಾಣವಾಗಿದ್ದರಲ್ಲಿ ಮೋದಿಯವರ ಪಾತ್ರ ದೊಡ್ಡದಿದೆ! ಎಂದು ಹೇಳಿದೆ.

ಸರ್ವಶಕ್ತ ಮೋದಿಗೆ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗಿಲ್ಲವೇಕೆ ಎಂದರೆ ಪಾಕಿಸ್ತಾನದ ಕಡೆ ಕೈ ತೋರಿಸುತ್ತಾರೆ ಎಂದು ಕಿಡಿಕಾರಿದೆ.

ಕಾಂಗ್ರೆಸ್ ಪಕ್ಷದ 40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ ಕೇಳಿದ್ದರು, ಆ ಲೂಟಿಯ ಬಗ್ಗೆ ತನಿಖೆಯೇ ಇಲ್ಲ. ಸಂತೋಷ್ ಪಾಟೀಲ್ ಪತ್ರಕ್ಕೆ ಪ್ರಧಾನಿಯ ಉತ್ತರವಿಲ್ಲ  ಎಂದು ಕಿಡಿಕಾರಿದೆ.

ಕರ್ನಾಟಕದಲ್ಲಿ ಭ್ರಷ್ಟಾಚಾರವು ಡಬಲ್ ವೇಗದಲ್ಲಿ ಮುನ್ನುಗ್ಗುತ್ತಿದೆ. ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರಕ್ಕೆ ಯಾವುದೇ ತಡೆಯಿಲ್ಲದೆ, ಯಾವುದೇ ಅಂಜಿಕೆ, ಅಳುಕಿಲ್ಲದೆ 40 % ಸರ್ಕಾರ ನಡೆಸಿದ್ದಕ್ಕೆ ತಮಗೆ ಧನ್ಯವಾದಗಳು ಎಂದು ಕಿಡಿಕಾರಿದೆ.

ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ ನರೇಂದ್ರ ಮೋದಿ ಅವರೇ, ತಾವು ಕರ್ನಾಟಕಕ್ಕೆ ನಯಾಪೈಸೆ ನೆರವು ನೀಡದೆ ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದೀರಿ.ತಮ್ಮ ಈ ದ್ರೋಹಕ್ಕೆ ಧನ್ಯವಾದಗಳು ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಮೋದಿ ಹೈ ತೊ ಮುಮ್ಕಿನ್ ಹೈ” ಎನ್ನುವಂತೆ ಇದು ಸಾಧ್ಯವಾಗಿದ್ದು ನಿಮ್ಮಿಂದಲೇ ಅಲ್ಲವೇ! ಎಂದು ಟೀಕಿಸಿದೆ.