ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗುತ್ತಲೇ ಇದ್ದು, ಮಾರ್ಚ್ 22ರಿಂದ ಈವರೆಗೂ 12 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲಾಗಿದೆ.
ಕಳೆದ ಎರಡು ವಾರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ 8.40 ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸೋಮವಾರ ಎರಡೂ ಇಂಧನಗಳ ದರವನ್ನು ಪ್ರತಿ ಲೀಟರ್ಗೆ ತಲಾ 40 ಪೈಸೆ ಹೆಚ್ಚಿಸಿವೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ಗೆ 103.81, ಡೀಸೆಲ್ಗೆ 95.07 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 109.41 ಮತ್ತು ಡೀಸೆಲ್ ದರ 93.23 ತಲುಪಿದೆ. ಸ್ಥಳೀಯ ಮಾರಾಟ ತೆರಿಗೆ ಮತ್ತು ಸಾಗಣೆ ವೆಚ್ಚಕ್ಕೆ ಅನುಗುಣವಾಗಿ ಮಾರಾಟ ದರವು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ 118.83 ಮತ್ತು ಡೀಸೆಲ್ 103.07, ಚೆನ್ನೈನಲ್ಲಿ ಪೆಟ್ರೋಲ್ 109.34, ಡೀಸೆಲ್ ದರ 99.42 ಆಗಿದೆ.