ಬೆಂಗಳೂರು: ಮನೆ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಲ್ಲಸಂದ್ರ ನಿವಾಸಿ ರಾಮಸ್ವಾಮಿ (46) ಬಂಧಿತ.
ಆರೋಪಿಯಿಂದ 30 ಲಕ್ಷ ರೂ. ಮೌಲ್ಯದ 602 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದರ ಬೀಗ ಒಡೆದು ಚಿನ್ನಾಭರಣ ಕಳವು ಮಾಡಿದ್ದ. ಈ ದೂರಿನ ಮೇರೆಗೆ ಬಂಧಿಸಲಾಗಿದೆ. ಈತ 25 ವರ್ಷಗಳಿಂದ ಮನೆ ಕಳವು ಮಾಡುವುದನ್ನು ಕಾಯಕ ಮಾಡಿಕೊಂಡಿದ್ದಾನೆ. ಆತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಮನೆ ಕಳವು ಪ್ರಕರಣಗಳು ದಾಖಲಾಗಿವೆ.
ಪ್ರಕರಣಗಳಲ್ಲಿ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಹೇಳಿದರು.














