ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಜಮಾನ್ ಉಸ್ಮಾನ್ (44) ಬಂಧಿತ ಆರೋಪಿ. ಜಮಾನ್ ಉಸ್ಮಾನ್ ನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದು, ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಮಧ್ಯೆ ಉಸ್ಮಾನ್ ನನ್ನು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರೆಹಮತ ಉಲ್ಲಾ ಸೇರಿ ಇಬ್ಬರನ್ನ ಪೊಲೀಸರು ಬಂಧಿಸಿದ್ದರು. ಬಂಧಿತರು ತಮಿಳುನಾಡಿನ ತೌಹೀದ್ ಜಮಾತ್ ಸದಸ್ಯನಾಗಿದ್ದರು.