ಮನೆ ಅಪರಾಧ ಹಳೆ ವೈಷಮ್ಯದ ಹಿನ್ನಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಹಳೆ ವೈಷಮ್ಯದ ಹಿನ್ನಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

0

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇನ್ನೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ರೌಡಿಶೀಟರ್ ಸಂತೋಷ್ ಅಲಿಯಾಸ್ ‘ಕರಡಿ’ (33) ಅನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಸ್ಥಳದಲ್ಲೇ ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ಘಟನೆಯು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ನಂತರದ ಭೀಕರ ದುರಂತ.

ರಾಮನಗರದ ಹಾರೋಹಳ್ಳಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಬಳಿ ಸಂತೋಷ್ ಬೈಕ್ ನಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಕಾರಿನಲ್ಲಿ ಹಿಂಬದಿಯಿಂದ ಗುದ್ದಿ, ನಂತರ ಮಾರಕಾಸ್ತ್ರಗಳಿಂದ ಆತನ ಮೇಲೆ ಅತಿಕ್ರಮಣ ಮಾಡಿ ಕೊಲೆಗೈದಿರುವ ಸಾಧ್ಯತೆಯಿದೆ. ಸಂತೋಷ್ ಅಲಿಯಾಸ್ ಕರಡಿ, ಬೆಂಗಳೂರು ಕೋಣನಕುಂಟೆ ನಿವಾಸಿ.

ಪೊಲೀಸ್ ಮೂಲಗಳ ಪ್ರಕಾರ, ಸಂತೋಷ್‌ ವಿರುದ್ಧ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಈ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂಬುದು ಪ್ರಾಥಮಿಕ ಅಂದಾಜು. ಕೊಲೆಗಾರರು ಸಂತೋಷ್ ನ ಚಲನವಲನವನ್ನು ತಿಳಿದು, ಪೂರ್ವ ಯೋಜನೆಯಂತೆ ದಾಳಿ ನಡೆಸಿರುವ ಸಾಧ್ಯತೆ ಇದೆ.

ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಫೂಟೇಜ್ ಗಳ ಪರಿಶೀಲನೆ, ಸಂತೋಷ್ ಗೆ ಯಾರ್ಯಾರು ಶತ್ರುತ್ವ ಹೊಂದಿದ್ದರು ಎಂಬ ತನಿಖೆ ಆರಂಭವಾಗಿದೆ.