ಮನೆ ಅಪರಾಧ ಟ್ಯೂಶನ್’ಗೆ ತೆರಳಿದ್ದ ವಿದ್ಯಾರ್ಥಿನಿ ಶವ ನೀರಿನ ಸಂಪ್ ನಲ್ಲಿ ಪತ್ತೆ

ಟ್ಯೂಶನ್’ಗೆ ತೆರಳಿದ್ದ ವಿದ್ಯಾರ್ಥಿನಿ ಶವ ನೀರಿನ ಸಂಪ್ ನಲ್ಲಿ ಪತ್ತೆ

0

ಮಂಡ್ಯ(Mandya): ಟ್ಯೂಶನ್‌ಗೆ ತೆರಳಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ನೀರಿನ ಸಂಪ್‌ನಲ್ಲಿ ಆಕೆಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ಟ್ಯೂಶನ್‌ಗಾಗಿ ಮನೆಯಿ೦ದ ಹೋಗಿದ್ದ ವಿದ್ಯಾರ್ಥಿನಿ ಬಳಿಕ ಮನೆಗೆ ವಾಪಸ್​ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ಪೋಷಕರು ವಿಚಾರಿಸಿದ್ದಾರೆ.

ಎಲ್ಲಿಯೂ ಬಾಲಕಿ ಪತ್ತೆಯಾಗಿಲ್ಲ. ಬಳಿಕ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿ ಪರಿಶೀಲಿಸಿದಾಗ ನೀರಿನ ಸಂಪ್ ಒಳಗೆ ಬಾಲಕಿಯ ಶವ ಪತ್ತೆಯಾಗಿದೆ.

ಇನ್ನು, ವಿದ್ಯಾರ್ಥಿನಿಯ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್​ಪಿ ಎನ್.ನವೀನ್‌ ಕುಮಾರ್, ಸಿಪಿಐ ಎ.ಕೆ. ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನರಜೆ ಮೇಲೆ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು
ಮುಂದಿನ ಲೇಖನಪನ್ಸಾರೆ ಹತ್ಯೆ:  ಆರೋಪಿಯ ಜಾಮೀನು ರದ್ದತಿಗೆ ಮಹಾರಾಷ್ಟ್ರ ಸರ್ಕಾರದ ಅನಾಸಕ್ತಿಗೆ ಬಾಂಬೆ ಹೈಕೋರ್ಟ್ ಕಿಡಿ