ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ ಅನಾಹುತವೊಂದು ತಪ್ಪಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಖಾಸಗಿ ಬಸ್ ಆನವಟ್ಟಿಯಿಂದ ಸೊರಬಗೆ ತೆರಳುತ್ತಿತ್ತು. ಘಟನೆ ನಡೆದ ತಕ್ಷಣ ಸ್ಥಳೀಯರು ಪ್ರಯಾಣಿಕರನ್ನು ರಕ್ಷಣೆ ಮಾಡಿದರು.
Saval TV on YouTube