ಮನೆ ರಾಜ್ಯ ರಾಜ್ಯದಲ್ಲಿ 6 ನೂತನ ಖಾಸಗಿ ವಿವಿ ಸ್ಥಾಪನೆ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ 6 ನೂತನ ಖಾಸಗಿ ವಿವಿ ಸ್ಥಾಪನೆ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ

0

ಬೆಳಗಾವಿ(Belagavi): ರಾಜ್ಯದಲ್ಲಿ ಆರು ನೂತನ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಯ ಮಸೂದೆಗಳಿಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರಿನಲ್ಲಿ ಸಪ್ತಗಿರಿ ವಿಶ್ವವಿದ್ಯಾಲಯ, ಟಿ.ಜಾನ್‌ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದಿಂದ ವಿಶ್ವವಿದ್ಯಾಲಯ, ದಾವಣಗೆರೆಯಲ್ಲಿ ಜಿ.ಎಂ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ ಕಿಷ್ಕಿಂದಾ ವಿಶ್ವವಿದ್ಯಾಲಯಗಳ ಸ್ಥಾಪನೆಯ ಮಸೂದೆ ಮಂಡನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಗ್ನಿ ಶಾಮಕ ಇಲಾಖೆಯಿಂದ ನಿರಪೇಕ್ಷಣಾ ಪ್ರಮಾಣ ಪತ್ರ ಪಡೆಯಬೇಕು ಎಂಬ ಅಂಶವನ್ನು ಮಸೂದೆಗೆ ಸೇರಿಸಲಾಗಿದೆ.