ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

0

ಕಾಪು: ರಾ.ಹೆ. 66 ರ ಕೊಪ್ಪಲಂಗಡಿ ಮಸೀದಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಡಿ.11ರ ಸೋಮವಾರ ರಾತ್ರಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.