ಮನೆ ಅಪರಾಧ ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣ: ಮೂವರ ಬಂಧನ, ಇಬ್ಬರು ಪರಾರಿ

ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣ: ಮೂವರ ಬಂಧನ, ಇಬ್ಬರು ಪರಾರಿ

0

ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು. ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿಯಲ್ಲಿ ಆ.24ರಂದು ನ್ಯಾನೊ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್​ ಕೇಂದ್ರದ (ಸಿಇಎನ್‌ ಎಸ್) 34 ವರ್ಷದ ವಿಜ್ಞಾನಿ ಅಶುತೋಷ್ ಕುಮಾರ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ್ದರು.

ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಮಾರ್ಗದರ್ಶನದಲ್ಲಿ ತಂಡ ರಚನೆಯಾಗಿತ್ತು. ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿ ಬಳಿ ಕಾರ್ಯಾಚರಣೆ ನಡೆಸಿ ಮಧ್ಯರಾತ್ರಿ ದರೋಡೆಗೆ ಹೊಂಚು ಹಾಕುತ್ತಿದ್ದಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿಯಿದ್ದ ಮಾರಕಾಸ್ತ್ರ, ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಮಾಡಲಾಗಿದೆ.