ಬೆಂಗಳೂರು: ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.
ತುಮಕೂರು ಜಿಲ್ಲೆಯ ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.