ಬೆಂಗಳೂರು: ಇವಿಎಂ ( ಎಲೆಕ್ಟ್ರಾನಿಕ್ ಮತಯಂತ್ರ) ಕಳವಿನ ಬಗ್ಗೆ ಉತ್ತರದಾಯಿತ್ವ ಯಾರದ್ದು ಎಂದು ಖಾರವಾಗಿ ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಬಗ್ಗೆ ದೇಶದಲ್ಲಿ ಅತ್ಯಂತ ಗಂಭೀರವಾಗಿ ಚರ್ಚೆ ಮಾಡಬೇಕಿದೆ ಎಂದರು.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇವಿಎಂಗಳಲ್ಲಿ ಮತ ಎಣಿಕೆ ನಡೆದು ಫಲಿತಾಂಶ ಹೊರಬಂದಾಗ ಆ ಫಲಿತಾಂಶದ ಬಗ್ಗೆ ಅನುಮಾನ ಪಡುವ ಪರಿಸ್ಥಿತಿ ಇದೆ. ಇದನ್ನು ಚುನಾವಣಾ ಆಯೋಗ ಸರಿ ಮಾಡಬೇಕು, ಇಂಥ ಅನುಮಾನಗಳನ್ನು ಅದು ನಿವಾರಿಸಬೇಕು ಎಂದು ಅವರು ಆಗ್ರಹಪಡಿಸಿದರು.