ಚಾಮರಾಜನಗರ : ಗ್ರಾಹಕರ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ, ಖತರ್ನಾಕ್ ಕಳ್ಳಿಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಲೀಲಾ ಬಂಧಿತ ಕಳ್ಳಿ. ಈಕೆ ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್‌ಗೆ ಎಂಟ್ರಿ ಕೊಟ್ಟು, 9 ಗ್ರಾಂ ಚಿನ್ನದ ಸರ ಹಾಗೂ ಪಿರಿಯಾಪಟ್ಟಣದಲ್ಲಿ 5 ಗ್ರಾಂನ ಒಡವೆಯನ್ನು ಕಳ್ಳತನ ಮಾಡಿದ್ದಳು.
ಅಂಗಡಿಯ ಸಿಬ್ಬಂದಿಯನ್ನು ಯಾಮಾರಿಸಿ ಆರೋಪಿಯು ಚಿನ್ನ ಕಳ್ಳತನ ಮಾಡುತ್ತಿದ್ದಳು. ಕಳ್ಳಿಯ ಕೈಚಳಕದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಖತರ್ನಾಕ್ ಕಳ್ಳಿಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.















