ಬೆಂಗಳೂರು(Bengaluru): ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
ರಾಜ್ಯ ಸರ್ಕಾರವು ಸರ್ಕಾರಿ ನೇಮಕಾತಿಗಳಲ್ಲಿ ನಡೆಸುತ್ತಿರುವ ಅಕ್ರಮಗಳಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ, ಬದುಕು ಅತಂತ್ರವಾಗಿದೆ. ಇಂತಹ ಲಕ್ಷಾಂತರ ನೊಂದ ಯುವ ಜನರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ನನ್ನ ಹೋರಾಟ ಮುಂದುವರೆಸುತ್ತೇನೆ. ಪಾರದರ್ಶಕ ನೇಮಕಾತಿ ನಡೆಯಲಿ, ಅರ್ಹರು ಆಯ್ಕೆಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
Saval TV on YouTube