ಟೊರೊಂಟೊ: ಕೆನಡಾದಲ್ಲಿ ನಡೆದ ಭೀಕರ ಆಟೋ ಆಪಘಾತದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆನಾಡದ ಟೊರೊಂಟೊದಲ್ಲಿ ಈ ಆಟೋ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆನಡಾದ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಮಾರ್ಚ್ 13 ರಂದು ಟೊರೊಂಟೊ ಬಳಿ ನಡೆದ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದರು. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆನಡಾ ಮಾಧ್ಯಮಗಳ ವರದಿಯು ಉಲ್ಲೇಖ ಮಾಡಿದ್ದು, ಈ ವರದಿಯನ್ನು ಟ್ವೀಟ್ ಮಾಡುವ ಮೂಲಕ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಅಪಘಾತದ ಬಗ್ಗೆ ಟ್ವೀಟ್ ಮಾಡಿರುವ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ, “ಕೆನಡಾದಲ್ಲಿ ಹೃದಯ ವಿದ್ರಾವಕ ದುರಂತ ನಡೆದಿದೆ. ಶನಿವಾರ ಟೊರೊಂಟೊ ಬಳಿ ಕಾರು ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ನಾನು ಸಂತಾಪವನ್ನು ಸೂಚಿಸುತ್ತೇನೆ. ಸಹಾಯಕ್ಕಾಗಿ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿಗಳ ಸ್ನೇಹಿತರೊಂದಿಗೆ ಟೊರೊಂಟೊದಲ್ಲಿರುವ ಭಾರತದ ಹೈ ಕಮಿಷನ್ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಟ್ವೀಟ್ ಅನ್ನು ಅಜಯ್ ಬಿಸಾರಿಯಾ ಭಾರತದ ಸಚಿವಾಲಯದ ವಕ್ತಾರ ಅರಿಂದಾಮ್ ಬಗ್ಚಿಗೆ ಟ್ಯಾಗ್ ಮಾಡಿದ್ದಾರೆ.
ಕೆನಡಾ ಪೊಲೀಸರಿಂದ ಮಾಹಿತಿ
“ಒಂಟ್‌ನ ಕ್ವಿಂಟೆ ವೆಸ್ಟ್‌ನಲ್ಲಿ ಹೆದ್ದಾರಿ 401 ರಲ್ಲಿ ವ್ಯಾನ್ ಮತ್ತು ಟ್ರಾಕ್ಟರ್ ಟ್ರೈಲರ್ ನಡುವೆ ಸಂಭವಿಸಿದ ಮಾರಣಾಂತಿಕ ಅಪಘಾತದಲ್ಲಿ ಭಾರತದ ಐದು ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದಲ್ಲಿ ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‌ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಮೃತಪಟ್ಟಿದ್ದಾರೆ. ಮೃತ ಭಾರತೀಯ ವಿದ್ಯಾರ್ಥಿಗಳು 21 ರಿಂದ 24 ವರ್ಷ ವಯಸ್ಸಿನವರಾಗಿದ್ದು, ಅವರೆಲ್ಲರೂ ಗ್ರೇಟರ್ ಟೊರೊಂಟೊ ಮತ್ತು ಮಾಂಟ್ರಿಯಲ್ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು ಎಂದು ಎಂದು ಕ್ವಿಂಟೆ ವೆಸ್ಟ್ ಒಪಿಪಿ ಸುದ್ದಿ ಬಿಡುಗಡೆಯಲ್ಲಿ ತಿಳಿಸಿದೆ.
ಅಪಘಾತದ ತನಿಖೆ ಮುಂದುವರಿದಿದೆ ಮತ್ತು ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.