ಮನೆ ರಾಜಕೀಯ ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ: ಹೆಚ್ ಡಿ ಕುಮಾರಸ್ವಾಮಿ

ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ: ಹೆಚ್ ಡಿ ಕುಮಾರಸ್ವಾಮಿ

0

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ. ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Join Our Whatsapp Group

ಹುಬ್ಬಳ್ಳಿಯಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿ ಮಠಕ್ಕೆ ತೆರಳಿ, ಸ್ವಾಮೀಜಿ ದರ್ಶನ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತಾನಾಡಿದ ಅವರು

ವಾಸ್ತವಿಕ, ಗ್ರೌಂಡ್ ರಿಯಾಲಿಟಿ ಮೇಲೆ ಟಿಕೆಟ್ ನೀಡುತ್ತೇವೆ. ಒಂದೂವರೆ ವರ್ಷದ ಹಿಂದೆ ಹಾಸನದ ಶಾಸಕರು ಸವಾಲು ಹಾಕಿದ್ದರು. ಹಾಗಾಗಿ ಸಾಮಾನ್ಯ ಕಾರ್ಯಕರ್ತನ ನಿಲ್ಲಿಸಿ ಗೆಲ್ಲುತ್ತೇನೆ ಎಂದಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ಹೆಚ್.ಡಿ.ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ. ಶಕುನಿಗಳು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮುಗಿಸಬೇಕು ಅಂತಿವೆ. ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಿಸಬೇಕೆಂಬುದೇ ನನ್ನ ಗುರಿ. ಹೆಚ್.ಡಿ.ರೇವಣ್ಣ 2 ಕ್ಷೇತ್ರಗಳ ಟಿಕೆಟ್ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಲ್ಲಾ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ನಡೆಯುತ್ತಿದೆ. ನಾನು ನಿರಂತರವಾಗಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದೆನೆ. ಕೆಲವು ಸಣ್ಣ- ಪುಟ್ಟ ಸಮಸ್ಯೆಗಳಿಂದ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈಗ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಈ ಹಿಂದೆ ದಲಿತ ಕಾರ್ಡ್ ನ್ನು ಕೊಟ್ಟಾಗ ಅವರು ಉಪಯೋಗ ಮಾಡಿಕೊಳ್ಳಿಲ್ಲ. ಈಗ ಅವರು ದಲಿತ ಸಿಎಂ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಹಿಂದಿನ ಲೇಖನಆರ್‌ ಎಸ್‌ ಎಸ್‌ ಮೆರವಣಿಗೆಗೆ ಸುಪ್ರೀಂಕೋರ್ಟ್ ಅಸ್ತು: ತಮಿಳುನಾಡು ಸರ್ಕಾರದ ಅರ್ಜಿ ವಜಾ
ಮುಂದಿನ ಲೇಖನಲಕ್ಷ್ಮಣ್ ಸವದಿ ಬಿಜೆಪಿಯಲ್ಲೇ ಇದ್ದಾರೆ: ಅಶ್ವಥ್ ನಾರಾಯಣ್