ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ.
ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರು ಹಳ್ಳಕ್ಕೆ ಬಿದ್ದಿದ್ದೆ.
ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
Saval TV on YouTube