ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ಉದ್ಯಾವರದಲ್ಲಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡಿದ್ದು ವಾಹನ ಜಖಂಗೊಂಡ ಘಟನೆ ಸೆ.19ರ ಗುರುವಾರ ಮುಂಜಾನೆ ನಡೆದಿದೆ.
ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ವಾಹನ ಬೆಳಗ್ಗೆ 4.30ರ ಸುಮಾರಿಗೆ ರಾಷ್ಟೀಯ ಹೆದ್ದಾರಿ 66ರ ಉದ್ಯಾವರ ಕಿಯಾ ಶೋ ರೂಂ ಮುಂಭಾಗದಲ್ಲಿ ಡಿಕ್ಕಿ ಹೊಡೆದಿದೆ. ಪರಿಸರದಲ್ಲಿ ವಿದ್ಯುತ್ ವ್ಯತ್ಯಯಗೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Saval TV on YouTube