ಬೆಂಗಳೂರು(Bengaluru) : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.
ಇಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಶೇ. 10 ರಷ್ಟು ಪ್ರವೇಶ ಶುಲ್ಕ ಹೆಚ್ಚಿಸಲಾಗುತ್ತಿದ್ದು, ಪ್ರಸಕ್ತ ವರ್ಷದಿಂದಲೇ ನೂತನ ಶುಲ್ಕ ಜಾರಿಯಾಗಲಿದೆ ಎಂದು ತಿಳಿಸಿದರು.
ಎರಡು ವರ್ಷಗಳಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಈ ವರ್ಷ ಶೇಕಡ 25ರಷ್ಟು ಶುಲ್ಕ ಹೆಚ್ಚಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿದ್ದವು. ಆದರೆ, ಶುಲ್ಕ ನಿಗದಿ ಸಮಿತಿ ಶೇ.10ರಷ್ಟು ಶುಲ್ಕ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಅದೇ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ.