ಬೆಂಗಳೂರು: ಕುತೂಹಲ ಹುಟ್ಟಿಸಿರುವ ಹೇಮಂತ್ ರಾವ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ “ಭೈರವನ ಕೊನೆ ಪಾಠʼʼ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.
ಸ್ಯಾಂಡಲ್ ವುಡ್‌ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಸಪ್ತಸಾಗರದಾಚೆ ಎಲ್ಲೋ(ಸೈಡ್ ಎ,ಬಿ) ಚಿತ್ರಗಳನ್ನು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಹೇಮಂತ್ ರಾವ್ ಮಾಸ್ ಹೀರೋ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದರಿಂದ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ರಿವೀಲ್ ಮಾಡಿದ ಚಿತ್ರತಂಡ ಇದೀಗ ಫಸ್ಟ್ ಲುಕ್ ರಿಲೀಸ್ ಮಾಡಿ ಕುತೂಹಲವನ್ನು ಹೆಚ್ಚಾಗಿಸಿದೆ.
ಯುದ್ಧಕ್ಕೆ ಹೊರಟ ಸೈನಿಕನಂತೆ ವಯಸ್ಸಾದ ವ್ಯಕ್ತಿಯ ಲುಕ್ ನಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಶತ್ರುಗಳ ನೋಟವನ್ನು ದುರ್ಬೀನು ಹಿಡಿದು ನೋಡುತ್ತಿರುವ ಲುಕ್ ನಲ್ಲಿ, ಗಡ್ಡ ಬಿಟ್ಟಿರುವ ಖದರ್ ನಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ.
ಇದೊಂದು ಡಿಫ್ರೆಂಟ್ ಕಥೆವುಳ್ಳ, ಶಿವಣ್ಣ ಹಿಂದೆಂದೂ ಕಾಣಿಸಿಕೊಳ್ಳದ ಅವತಾರದಲ್ಲಿ ಕಾಣಿಸಿಕೊಳ್ಳುವ ಸಿನಿಮಾವಾಗಿರಲಿದೆ ಎನ್ನುವುದು ಪೋಸ್ಟರ್ ನೋಡಿ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
ವೈಶಾಖ್ ಗೌಡ ಎನ್ನುವವರು “ವಿಜೆ ಫಿಲಂಸ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಖ್ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೆಪ್ಟೆಂಬರ್ ನಂತರ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಅಂದಹಾಗೆ, ಸೌತ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ. ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಚಿತ್ರ ಮೂಡಿಬರುತ್ತಿದೆ.