Saval TV on YouTube
ನವದೆಹಲಿ(Newdelhi): ಅಮೃತಸರ–ಸಿಂಗಪುರ ಮಾರ್ಗದ ಸ್ಕೂಟ್ ಏರ್’ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಆಗಿರುವ ಘಟನೆ ವರದಿಯಾಗಿದೆ.
ಅಮೃತಸರದಿಂದ ಸಿಂಗಪುರ ಮಾರ್ಗದ ಸ್ಕೂಟ್ ಏರ್ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಹೊರಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವೈಫಲ್ಯದ ಬಗ್ಗೆ ತನಿಖೆಗೆ ಆದೇಶಿಸಿದೆ.
ಅಮೃತಸರ ವಿಮಾನ ನಿಲ್ದಾಣದಿಂದ ವಿಮಾನವು ಬುಧವಾರ ರಾತ್ರಿ 7.55 ಕ್ಕೆ ಹೊರಡಬೇಕಿತ್ತು, ಆದರೆ 35 ಪ್ರಯಾಣಿಕರನ್ನು ಬಿಟ್ಟು 3 ಗಂಟೆಗೆ ಟೇಕ್ ಆಫ್ ಆಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಘಟನೆಯಿಂದ ಕೆರಳಿದ ಪ್ರಯಾಣಿಕರು ಅಮೃತಸರ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ.