ಮನೆ ರಾಜ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ `ಎನ್ಐಎ’ಗೆ ವಹಿಸಲು ಸರ್ಕಾರ ತೀರ್ಮಾನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ `ಎನ್ಐಎ’ಗೆ ವಹಿಸಲು ಸರ್ಕಾರ ತೀರ್ಮಾನ

0

ಬೆಂಗಳೂರು(Bengaluru): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರಿಯಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದರು.

ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದ್ದು, ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು ಹೇಳಿದ್ದೇನೆ. ತನಿಖೆ ಪ್ರಗತಿಯಲ್ಲಿದ್ದು, ಎಲ್ಲ ಮಾಹಿತಿ ಪಡೆದ ಮೇಲೆ ಎನ್​​ಐಎಗೆ ಪತ್ರ ಬರೆಯುಲು ತಿಳಿಸಿದ್ದೇನೆ ಎಂದು ಹೇಳಿದರು.

ಬಾರ್ಡರ್​​​ನಲ್ಲಿ​ ಸಂಪೂರ್ಣವಾಗಿ ಸಿಸಿಟಿವಿ ಮೂಲಕ ಕಣ್ಗಾವಲು ವಹಿಸಲಾಗುವುದು. ಎರಡು ರಾಜ್ಯಗಳ ಸಂಪರ್ಕ ಇರುವ ಕಡೆ ಚೆಕ್​ ಪೋಸ್ಟ್ ಹಾಕಬೇಕು. ಸೂಕ್ಷ್ಮ ಊರುಗಳಲ್ಲಿ ಪೊಲೀಸರು ತಾತ್ಕಾಲಿಕ ಕ್ಯಾಂಪ್ ಮಾಡಬೇಕು. ರಾತ್ರಿ ಗಸ್ತು ಹೆಚ್ಚಳ ಸೇರಿದಂತೆ ಹಲವು ಕ್ರಮಗಳಿಗೆ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ, ಗೃಹ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಕೂಡ ನಿರ್ಧರಿಸಲಾಗಿದೆ. ಕೆಎಸ್ಆರ್​​ಪಿಯ ಇನ್ನೊಂದು ಬೆಟಾಲಿಯನ್​ ಅನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ಥಳಾಂತರ ಮಾಡಲಾಗುವುದು ಎಂದೂ ಸಿಎಂ ಮಾಹಿತಿ ನೀಡಿದರು.