ಮನೆ ರಾಜ್ಯ ಪಿಡಿಒಗಳ ಹುದ್ದೆ ಉನ್ನತೀಕರಿಸಿ, ವೇತನ ಹೆಚ್ಚಳ ಮಾಡಿದ ಸರ್ಕಾರ

ಪಿಡಿಒಗಳ ಹುದ್ದೆ ಉನ್ನತೀಕರಿಸಿ, ವೇತನ ಹೆಚ್ಚಳ ಮಾಡಿದ ಸರ್ಕಾರ

0

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ನಿರ್ವಹಿಸುತ್ತಿರುವ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಿಸಿ ವೇತನವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸದರಿ ಆದೇಶ ಹೊರಡಿಸಿದ್ದಾರೆ.

ಇಲಾಖೆಯ ಅಡಿಯಲ್ಲಿ ಮಂಜೂರಾಗಿರುವ 6021 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಣ ಮಾಡಲಾಗಿದೆ. ಅಲ್ಲದೇ  ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ ಎಂದಿದ್ದಾರೆ.

ಪಿಡಿಓಗಳ ಉನ್ನತೀಕರಣ, ಪುನರ್ ಪದನಾಮೀಕರಿಸಿದ ನಂತರ ವೇತನ ಶ್ರೇಣಿಯನ್ನು ರೂ.37,900 ರಿಂದ 70, 850 ಇದ್ದದ್ದನ್ನು ಗ್ರೂಪ್ ಸಿ ವೃಂದದ 1500 ಪಿಡಿಓಗಳಿಗೆ ತಕ್ಷಣದಿಂದ ಅನ್ವಯವಾಗುವಂತೆ ವೇತನ ಶ್ರೇಣಿ 40, 900 ರಿಂದ 78, 200ಕ್ಕೆ ಹೆಚ್ಚಿಸಲಾಗಿದೆ.

ಇದಲ್ಲದೇ ಉಳಿದ 4521 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ. 37,900 ರಿಂದ 70,850 ಮುಂದುವರೆಸಲಾಗಿದೆ. ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೃಂದಗಳಿಗೆ ನೇಮಕಾತಿ ಕಾರ್ಯವಿಧಾನವನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನವಶಪಡಿಸಿಕೊಂಡ ವಾಹನಗಳನ್ನು ಬಾಂಡ್ ಪಡೆದು ಬಿಡುಗಡೆ ಮಾಡಿ: ಹೈಕೋರ್ಟ್
ಮುಂದಿನ ಲೇಖನರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳ ಅವಧಿ ಪೂರ್ವ ಬಿಡುಗಡೆ: ಸುಪ್ರೀಂಕೋರ್ಟ್