ಮನೆ ರಾಜ್ಯ 76 ಮಂದಿ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

76 ಮಂದಿ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ-2023ರ  ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕಂದಾಯ ಇಲಾಖೆಯ 76 ಮಂದಿ ತಹಶೀಲ್ದಾರ್ ಗಳನ್ನು ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ವರ್ಗಾವಣೆ ಮಾಡಲಾಗಿದೆ.

ಇದರಲ್ಲಿ ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಗ್ರೇಡ್-1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್.ಮಹೇಶ್ ಅವರನ್ನು ಮೈಸೂರು ಜಿಲ್ಲೆಯ  ಹೆಚ್.ಡಿ.ಕೋಟೆ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಗೆ, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಎಸ್. ಅವರನ್ನು ಸ್ಥಳ ನಿರೀಕ್ಷಣೆಯಲ್ಲಿಡಲಾಗಿದೆ.

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ತಹಶೀಲ್ದಾರ್ ರಾಮ ಪ್ರಸಾದ್ ಅವರನ್ನು ಪುರಸಭಾ ತಹಶೀಲ್ದಾರ್  ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

40
ಹಿಂದಿನ ಲೇಖನವಿಶಾಖಪಟ್ಟಣ ಆಂದ್ರಪ್ರದೇಶದ ನೂತನ ರಾಜಧಾನಿ: ಜಗನ್ ಮೋಹನ್ ರೆಡ್ಡಿ
ಮುಂದಿನ ಲೇಖನಜೀವನವನ್ನು ಮತ್ತಷ್ಟು ಸಂಭ್ರಮಿಸಿ