ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು ೧೫ ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ ಇದ್ದ ಭಿನ್ನಮತ ಶಮನವಾದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ವಾಪಸ್ ಕಳುಹಿಸಿದ್ದ ೩ ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ನಿಯಂತ್ರಣ ವಿಧೇಯಕ, ರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪೌರಾಡಳಿತ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.
ಈ ಸಂಬಂಧ ಕಳೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ಸ್ಪಷ್ಟೀ ಕರಣದೊಂದಿಗೆ ವಿಧೇಯಕಗಳನ್ನು ರಾಜ್ಯಪಾಲರಿಗೆ ವಾಪಸ್ ಕಳುಹಿಸಲಾಗಿತ್ತು.ರಾಜ್ಯ ಸರ್ಕಾರ ಕಳುಹಿಸಿದ್ದ ಒಟ್ಟು ೧೧ ವಿಧೇಯಕಗಳಿಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡುವುದಕ್ಕಿಂತ ಪೂರ್ವದಲ್ಲಿಯೇ ಕೆಲ ವಿಧೇಯಕಗಳನ್ನು ವಾಪಸ್ ಕಳುಹಿಸಲಾಗಿತ್ತು