ಮನೆ ರಾಜ್ಯ ಕಳೆದೆರಡು ದಿನಗಳಿಂದ ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

ಕಳೆದೆರಡು ದಿನಗಳಿಂದ ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

0

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಓಡಾಡುತ್ತಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ತಂದೊಡ್ಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸತತ ಕಾರ್ಯಾಚರಣೆ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೊಮ್ಮನಹಳ್ಳಿಯ ಕೂಡ್ಲುಗೇಟ್ ಬಳಿ ಪಾಳುಬಿದ್ದ ಕಟ್ಟಡದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ಕಟ್ಟಡದಲ್ಲಿ ಇರುವುದನ್ನು ಪತ್ತೆಹಚ್ಚಿದ ಥರ್ಮಲ್ ಡ್ರೋನ್ ಪತ್ತೆ ಮಾಡಿತ್ತು. ಇದರ ಆಧಾರದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಕೊನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಬಳಿಕ ಬಲೆ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಇದರೊಂದಿಗೆ ಮೈಸೂರು ಲೆಪರ್ಡ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಯಶಸ್ವಿಯಾಗಿದೆ.

ಸದ್ಯ ಬಲೆಗೆ ಬಿದ್ದ ಚಿರತೆಯನ್ನು ಬೋನ್​ಗೆ ಹಾಕಲಾಗಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.

ಮೈಸೂರು ಲೆಪರ್ಡ್ ಟಾಸ್ಕ್ ಫೋರ್ಸ್ ಶೋಧ ನಡೆಸಿದ್ದರು. ಅಲ್ಲದೇ ಅರಣ್ಯ ಇಲಾಖೆ ಡಿಸಿಎಫ್ ರವೀಂದ್ರ ಅವರು ಇಂದು ಬೆಳಗ್ಗೆಯಿಂದ ಕಾರ್ಯಚರಣೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.