ಮನೆ ಹವಮಾನ ಹವಾಮಾನ ಇಲಾಖೆಯಿಂದ ಮೇ 17ರಿಂದ ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಹವಾಮಾನ ಇಲಾಖೆಯಿಂದ ಮೇ 17ರಿಂದ ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

0

ಬೆಂಗಳೂರು: ಬೆಂಗಳೂರಿನಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್​ಸಿಟಿ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್, ನಾಯಕನಹಟ್ಟಿ, ಹಿರಿಯೂರು, ನಾಪೋಕ್ಲು, ಕಡೂರು, ಅಂಕೋಲಾ, ಚಿಕ್ಕಬಳ್ಳಾಪುರ, ಬೆಂಗಳೂರು ಕೆಐಎಎಲ್​, ಕಳಸ, ಶಿಗ್ಗಾಂವ್, ಚಿಟಗುಪ್ಪ, ಲೋಂಡಾ, ಗೋಕರ್ಣದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದರೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಯಚೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಶಕ್ತಿ ಚಂಡಮಾರುತದಿಂದಾಗಿ ತೆಲಂಗಾಣದಲ್ಲೂ ಮಳೆಯಾಗಿದೆ.