ಮನೆ ಹವಮಾನ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

0

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದರೂ ಕೊಂಚ ಇಳಿಮುಖ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವಾರ ರೆಡ್ ಮತ್ತು ಆರಂಜ್ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಶನಿವಾರದಿಂದ ಮೂರು ದಿನಗಳಿಗೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ನೀಡಿದೆ. ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಕೂಡ ಸೂಚಿಸಿದೆ.

Join Our Whatsapp Group

ಕರಾವಳಿ ಜಿಲ್ಲೆಯ ಹಲವು ಸ್ಥಳಗಳಲ್ಲಿ, ಉತ್ತರ ಒಳನಾಡಿನ ಕೆಲವು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆ ಮುಂದುವರೆಯಲಿದೆ. ಶುಕ್ರವಾರ ಬೆಳಗ್ಗೆಯವರೆಗೆ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 8 ಸೆ.ಮೀ ಮಳೆಯಾಗಿದೆ. ಇನ್ನು ಉಡುಪಿಯ ಕೋಟದಲ್ಲಿ 7, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 6, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 5 ಸೆ.ಮೀ, ಉಪ್ಪಿನಂಗಡಿಯಲ್ಲಿ 4 ಸೆ.ಮೀ ಮಳೆ ಬಂದಿದೆ. ಉಳಿದಂತೆ ಪುತ್ತೂರಿನ ಹೆಚ್ಎಂ​ಎಸ್, ಮೂಲ್ಕಿ, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲೂ ಉತ್ತಮ ಮಳೆ ಸುರಿದಿದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ರಿಂದ 31 ಡಿಗ್ರಿ ಇರಲಿದೆ ಎಂದು ಹೇಳಿದೆ.

ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡು ಮೇಲೆ ಸಾಧಾರಣವಾಗಿದೆ. ಉತ್ತರ ಒಳನಾಡು ಮೇಲೆ ದುರ್ಬಲವಾಗಿದೆ. ಶನಿವಾರ ಕರಾವಳಿಯ ಬಹುತೇಶ ಕಡೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಹಿಂದಿನ ಲೇಖನಅಂಬ್ಯುಲೆನ್ಸ್ – ಬೈಕ್ ಅಪಘಾತ: ಮೂವರ ಸಾವು
ಮುಂದಿನ ಲೇಖನವಾಲ್ಮೀಕಿ ನಿಗಮದ ಪ್ರಕರಣ: ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ