ಮನೆ ಅಪರಾಧ ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

0

ಬೆಂಗಳೂರು(Bengaluru): ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಲು ಇಲಾಖೆ ಹೊಂದಿದ್ದ ಟ್ವಿಟರ್ ಖಾತೆಯನ್ನು ಎರಡು ದಿನಗಳ ಹಿಂದೆ ಹ್ಯಾಕ್ ಮಾಡಿದ್ದು, ಅಸಂಬದ್ಧವಾಗಿ ಸರಣಿ ಟ್ವೀಟ್ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಸದ್ಯ ಖಾತೆ ಹ್ಯಾಕ್ ಆಗಿರುವುದನ್ನು ಗಮನಿಸಿರುವ ಇಲಾಖೆಯ ಡಿಜಿಟಲ್ ಕಮ್ಯುನಿಕೇಷನ್ ತಂಡ ಸೈಬರ್ ಕ್ರೈಂ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆಯೂ ಸಹ ಸೈಬರ್ ವಂಚಕರು ಜಯನಗರ ಸಂಚಾರಿ ಪೊಲೀಸ್, ವಿವೇಕನಗರ ಪೊಲೀಸ್ ಠಾಣೆ ಸೇರಿದಂತೆ ಅನೇಕ ಅಧಿಕೃತ ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡಿದ್ದರು.