Saval TV on YouTube
ನವದೆಹಲಿ: ತಂದೆ, ಅಜ್ಜಿ, ಇಬ್ಬರು ಸಹೋದರಿಯರು ಸೇರಿ ಒಟ್ಟು ನಾಲ್ವರನ್ನು ಮಾದಕ ವ್ಯಸನಿ ಮಗನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ದೆಹಲಿಯ ಪಾಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಆರೋಪಿಯನ್ನು ಕೇಶವ್ ಎಂದು ಗುರುತಿಸಲಾಗಿದೆ.
ಮೃತದೇಹಗಳು ಮನೆಯ ಆವರಣದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ವಿಷಯ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಕೇಶವನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇಶವ ಮಾದಕ ವ್ಯಸನಿಯಾಗಿದ್ದ ಎನ್ನಲಾಗಿದ್ದು, ಇದೆ ಕಾರಣದಿಂದ ಕೊಲೆ ನಡೆದಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.














