ಮನೆ ಆರೋಗ್ಯ ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವ ಅಭ್ಯಾಸವಿದ್ಯಾ – ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಾ..?

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವ ಅಭ್ಯಾಸವಿದ್ಯಾ – ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಾ..?

0

ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ ತಿನ್ನಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಹಾಗಾಗಿ ಕಂಡ ಕಂಡ ಸಮಯದಲ್ಲಿ ಸೇವನೆ ಮಾಡಿದಾಗ ಅದರಿಂದ ಸಿಗುವ ಲಾಭಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಹಣ್ಣು ಸೇವನೆ ಮಾಡುವುದು ಒಳ್ಳೆಯದೇ ಅಥವಾ ತಪ್ಪೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಕಾಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ.

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನಬಹುದೇ? – ಆರೋಗ್ಯ ತಜ್ಞರ ಪ್ರಕಾರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವುದರಲ್ಲಿ ತಪ್ಪಿಲ್ಲ. ಆದರೆ ಯಾವ ಹಣ್ಣು ತಿನ್ನುತ್ತೀರಿ ಎಂಬುದು ಮುಖ್ಯವಾಗುತ್ತದೆ. ಸೇಬು, ಪಪ್ಪಾಯಿ, ಕರಬೂಜ್‌ ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಆರೋಗ್ಯಕರ. ಆದರೆ ಬಾಳೆಹಣ್ಣು ಖಾಲಿ ಹೊಟ್ಟೆಯಲ್ಲಿ ತಿನ್ನುವುದನ್ನು ತಪ್ಪಿಸುವುದು ಒಳ್ಳೆಯದು.

ಖಾಲಿ ಹೊಟ್ಟೆಯಲ್ಲಿ ಹಣ್ಣನ್ನು ಸೇವನೆ ಮಾಡುವುದರಿಂದ ಸಿಗುವ ಲಾಭಗಳು : ಬೆಳಿಗ್ಗೆ ಹಣ್ಣು ತಿನ್ನುವುದರಿಂದ ಜೀರ್ಣಕ್ರಿಯೆ ಸಕ್ರಿಯಗೊಳ್ಳುತ್ತದೆ. ಹಣ್ಣುಗಳು ಹಗುರವಾಗಿದ್ದು ಸುಲಭವಾಗಿ ಜೀರ್ಣವಾಗುತ್ತವೆ, ಇದರಿಂದ ದೇಹಕ್ಕೆ ತಕ್ಷಣ ಶಕ್ತಿ ದೊರೆಯುತ್ತದೆ. ಹಣ್ಣುಗಳಲ್ಲಿ ಇರುವ ಫೈಬರ್, ವಿಟಮಿನ್ ಮತ್ತು ಖನಿಜಾಂಶಗಳು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ನೀಡುತ್ತವೆ. ಇದರಿಂದ ಹೊಟ್ಟೆ ತುಂಬಿದ ಭಾವನೆ ಉಂಟಾಗಿ ಅನಗತ್ಯವಾಗಿ ಮತ್ತೆ ಮತ್ತೆ ತಿನ್ನುವ ಅಭ್ಯಾಸ ಕಡಿಮೆಯಾಗುತ್ತದೆ.

ಎಲ್ಲರಿಗೂ ಸೂಕ್ತವೇ? – ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವುದು ಎಲ್ಲರಿಗೂ ಸೂಕ್ತವಲ್ಲ. ಅಜೀರ್ಣ, ಆಸಿಡ್ ಸಮಸ್ಯೆ ಸಮಸ್ಯೆಯಿರುವವರಿಗೆ ಇದು ಒಳ್ಳೆಯದಲ್ಲ. ವಿಶೇಷವಾಗಿ ಕಿತ್ತಳೆ ಮತ್ತು ಬಾಳೆಹಣ್ಣು ಇಂತಹವರಿಗೆ ಹೊಟ್ಟೆ ನೋವು ಮತ್ತು ಕಿರಿಕಿರಿಗೆ ಕಾರಣವಾಗಬಹುದು. ಇಂತಹವರು ಮಿತ ಪ್ರಮಾಣದಲ್ಲಿ ಪಪ್ಪಾಯಿ ಹಣ್ಣು ಸೇವಿಸುವುದು ಉತ್ತಮವಾಗಿದೆ.

ಸರಿಯಾದ ವಿಧಾನ ಯಾವುದು? – ಹಣ್ಣುಗಳನ್ನು ಸದಾ ತಾಜಾ ರೂಪದಲ್ಲೇ ತಿನ್ನಬೇಕು. ಜ್ಯೂಸ್ ಮಾಡುವುದಕ್ಕಿಂತ ಹಣ್ಣು ತಿನ್ನುವುದು ಹೆಚ್ಚು ಲಾಭಕರ. ಆದರೆ ಒಂದೇ ವೇಳೆ ಎಲ್ಲಾ ರೀತಿಯ ಹಣ್ಣುಗಳನ್ನು ಮಿಶ್ರಣ ಮಾಡಿ ಹೆಚ್ಚೆಚ್ಚು ಪ್ರಮಾಣದಲ್ಲಿ ತಿನ್ನುವುದನ್ನು ತಪ್ಪಿಸಬೇಕು. ಹಣ್ಣು ತಿಂದ ತಕ್ಷಣವೇ ಊಟ ಮಾಡುವುದೂ ಕೂಡ ಸರಿಯಲ್ಲ.