ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣ ಉದ್ಘಾಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಮಾದರಿಯನ್ನು ಪರಿಶೀಲಿಸಿದರು.
ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು.














