ಮನೆ ಸುದ್ದಿ ಜಾಲ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರಗತಿ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರಗತಿ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ

0

ಬೆಂಗಳೂರು: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಡಾ‌.ಸಿ‌.ಎನ್.ಅಶ್ವತ್ಥ್ ನಾರಾಯಣ, ಆರ್. ಅಶೋಕ್ , ಸಿ‌.ಸಿ. ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.

ಶಿಲ್ಪಿ ರಾಮ್ ಸುತಾರಾ ಅವರಿಗೆ ಅಭಿನಂದನೆ:

ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರ್. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು ನಿರ್ಮಿಸಿದ ಖ್ಯಾತಿ ಅವರದ್ದು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ರಾಮ್ ಸುತಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಪ್ರಗತಿ ಪ್ರತಿಮೆ ಅನಾವರಣ ಮಾಡಿದ ನಂತರ ಸಾರ್ವಜನಿಕ ಸಭೆಗೆ ತೆರಳಿದರು.

ಕೆಂಪೇಗೌಡ ಕಂಚಿನ ಪ್ರತಿಮೆಯ ವಿಶೇಷತೆ ಏನು?

– ಕೆಂಪೇಗೌಡರ ಕಂಚಿನ ಪ್ರತಿಮೆಯ ಎತ್ತರ 108ಅಡಿ

-218 ಟನ್‌ ತೂಕದ ಪ್ರತಿಮೆ ಇದಾಗಿದೆ ( 120 1ನ್ ಉಕ್ಕು, 98 ಟನ್ ಕಂಚು)

– ಕೆಂಪೇಗೌಡ ಪ್ರತಿಮೆಯ ಖಡ್ಗದ ತೂಕ 4 ಟನ್ ನಷ್ಟದೆ.

– ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಮಾಡಿದ ಖರ್ಚು 84 ಕೋಟಿ.

– ಪ್ರತಿಮೆಯನ್ನು ಸಿದ್ಧಪಡಿಸಿದವರು ರಾಮ್‌ಸುತಾರ್ ಕ್ರಿಯೇಷನ್ಸ್.

– ಪ್ರತಿಮೆಯ ಸುತ್ತ ಥೀಂ ಪಾರ್ಕ್‌ ನಿರ್ಮಾಣ. 23 ಎಕರೆ ವಿಸ್ತೀರ್ಣದ ಥೀಂ ಪಾರ್ಕ್.