ಮನೆ ಸ್ಥಳೀಯ ಮಹನೀಯರ ತತ್ವ, ಆದರ್ಶ ಸಿದ್ದಾಂತಗಳು ಜನರಿಗೆ ತಲುಪಬೇಕು: ಆರ್ ಲೋಕನಾಥ್

ಮಹನೀಯರ ತತ್ವ, ಆದರ್ಶ ಸಿದ್ದಾಂತಗಳು ಜನರಿಗೆ ತಲುಪಬೇಕು: ಆರ್ ಲೋಕನಾಥ್

0

ಮೈಸೂರು: ಜಯಂತಿಗಳನ್ನು ಆಚರಣೆ ಮಾಡುವುದು ಮಹನೀಯರ ತತ್ವ ಆದರ್ಶ ಸಿದ್ಧಾಂತಗಳನ್ನು ಜನರಿಗೆ ತಲುಪಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವರ್ಷ ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಒಟ್ಟಿಗೆ ಆಚರಣೆ ಆಯ್ಕೆ ಮಾಡಲಾಗಿತ್ತು. ಇದರಿಂದ ಸಂಪನ್ಮೂಲ ಕ್ರೂಡಿಕರಣ ಮಾಡಿ, ಹೆಚ್ಚಿನ ಜನರು ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವಾಗುತ್ತದೆ ಸಲಹೆ ನೀಡಿದರು.

ಪ್ರತಿ ಜಯಂತಿ ಆಚರಣೆಗೆ ಸರ್ಕಾರದ ವತಿಯಿಂದ 50 ಸಾವಿರ ಅನುದಾನ ನೀಡಲಾಗುತ್ತದೆ. ಸಮಿತಿಯ ನಿರ್ಧಾರದಂತೆ ಮಹಾಯೋಗಿ ವೇಮನ ಜಯಂತಿ ಹಾಗೂ ವೇಮನ ಜಯಂತಿಯನ್ನು ಒಟ್ಟಿಗೆ ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.

ಜಯಂತಿಯಲ್ಲಿ ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಅವರ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ನೀಡಲಾಗುವುದು ಎಂದು ತಿಳಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗೀತಾ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಜಯಂತಿ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಕುಡಿಯುವ ನೀರನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಾಡಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುದರ್ಶನ್ ಅವರು ಮಾತನಾಡಿ ಒಂದೊಂದು ಜಯಂತಿಗೆ ತಲಾ 50 ಸಾವಿರ ಅನುಧಾನ ಇದೆ. ಎರಡು ಜಯಂತಿಗಳನ್ನು ಒಟ್ಟಿಗೆ ಸೇರಿ ಆಚರಣೆ ಮಾಡಿದರೆ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುತ್ತದೆ. ಒಟ್ಟಿಗೆ ಆಚರಣೆ ಮಾಡಿದರೆ ಲಘು ಉಪಹಾರ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತದೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಲಾಗುವುದು ಎಂದರು.

ಸಮುದಾಯದ ಮುಖಂಡರು ಮಾತನಾಡಿ ಜಯಂತಿಗಳು ಜಾತಿಗಳಿಗೆ ಸೀಮಿತವಾಗಬಾರದು. ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಮುದಾಯಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

  • ಟ್ಯಾಗ್ಗಳು
  • Mysore
ಹಿಂದಿನ ಲೇಖನವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ: ಅನಪುರ ಶಾಲೆಯ ಹೆಡ್ ​ಮಾಸ್ಟರ್​ ಅಮಾನತು
ಮುಂದಿನ ಲೇಖನಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ