ಮನೆ ಸುದ್ದಿ ಜಾಲ ರಾಜ್ಯದಲ್ಲಿ ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿ

ರಾಜ್ಯದಲ್ಲಿ ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿ

0

ಬೆಂಗಳೂರು:(Bengaluru) ಈಗಾಗಲೇ ಅವಶ್ಯಕ ಸಾಮಾಗ್ರಿಗಳ ಬೆಲೆ ಏರಿಕೆ  ಜನತೆಯನ್ನು ಕಂಗಾಲು ಮಾಡಿದ್ದು, ಈ ಬೆನ್ನಲ್ಲೇ ಹೈನುಗಾರಿಕೆಗೆ ಬೆಂಬಲ ನೀಡುವ ಉದ್ದೇಶದಿಂದ ಹಾಲಿನ ದರ (Milk Rate) ಹೆಚ್ಚಳ(Increase) ಮಾಡುವಂತೆ ಮುಖ್ಯಮಂತ್ರಿಗಳಿಗೆ(Chief Minister) ಮನವಿ(memorandum) ಸಲ್ಲಿಸಲಾಗಿದೆ.

ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿದ್ದು, ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ಅಮೂಲ್‌ ಸೇರಿದಂತೆ ದೇಶದ ವಿವಿಧ ಸಹಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ಮಾರಾಟ ದರವನ್ನು ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ಹೋಲಿಕೆ ಮಾಡಿದರೆ ಇತರೆ ಸಂಸ್ಥೆಗಳ ದರವು ಪ್ರತಿ ಲೀಟರ್‌ಗೆ 8ರಿಂದ 10 ರು. ಹೆಚ್ಚಿದೆ. ಹೀಗಾಗಿ ನಂದಿನಿ ಹಾಲಿನ ಮಾರಾಟ ದರವನ್ನು ಕನಿಷ್ಠ ಪ್ರತಿ ಲೀಟರ್‌ಗೆ 3 ರು. ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಇದರಿಂದ ಹಾಲು ಉತ್ಪಾದಕರಿಗೆ ಕನಿಷ್ಠ 2 ರು. ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಹಾಗೂ ಹಾಲು ಮಾರಾಟಗಾರರಿಗೆ 1 ರು. ನೀಡಲು ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 11 ಮಂದಿ ಸಾವು
ಮುಂದಿನ ಲೇಖನಬೈಬಲ್ ಅಧ್ಯಯನ ಮಾಡಲು ಒತ್ತಾಯ: ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿ