ಬೆಂಗಳೂರು(Bengaluru): ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿdfdu, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಾಳೆ ಬೆಳಿಗ್ಗೆ 11ಗಂಟೆಗೆ ಸುದ್ಧಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪಿಯು ಬೋರ್ಡ್ ಪ್ರಕಟಿಸಿದೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪದವಿಪೂರ್ವ ಅಧಿಕೃತ ವೆಬ್ ಸೈಟ್ www.karresult.nic.in ಹೋಗುವುದು.
ಅಥವಾ https://karresults.nic.in/ or https://www.karresult.nic.in/ ಎಂಬುದನ್ನು ಕ್ಲಿಕ್ ಮಾಡಿ.
ಎಸ್‌ಎಸ್‌ಎಲ್‌ಸಿ ಮಾದರಿಯಲ್ಲೇ ಹೊಮ್ ಪೇಜ್ ತೆರೆದುಕೊಂಡು ರಿಸಲ್ಟ್ ಲಿಂಕ್ ಬ್ಲಿಂಕ್ ಆಗುತ್ತಿರುತ್ತೆ ಅದನ್ನು ಕ್ಲಿಕ್ ಮಾಡಿ.
ನೊಂದಣಿ ನಂಬರ್ ಅನ್ನು ಎಂಟ್ರಿ ಮಾಡಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿದರೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಬಹುದು.