ಮನೆ ರಾಜ್ಯ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿ ಪಾದಯಾತ್ರೆ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿ ಪಾದಯಾತ್ರೆ

0

ತುಮಕೂರು(Tumkur): ಪಿಂಚಣಿ ಸೌಲಭ್ಯವು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನುದಾನಿತ ಶಾಲಾ, ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿ ನಗರದ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ಪಾದಯಾತ್ರೆಯಲ್ಲಿ ಆರಂಭಿಸಿದರು.

ರಾಜ್ಯ ಅನುದಾನಿತ ಶಾಲೆ, ಕಾಲೇಜುಗಳ ನೌಕರರ ಸಂಘದ ನೇತೃತ್ವದಲ್ಲಿ ಈ ಹೋರಾಟ ಹಮ್ಮಿಕೊಂಡಿದ್ದು, ಮಠದ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ನೌಕರರು ಘೋಷಣೆ ಕೂಗುತ್ತಾ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿದರು.

2006ರ ಏಪ್ರಿಲ್ ನಂತರ ನೇಮಕಗೊಂಡ ನೌಕರರ ಎನ್‌ಪಿಎಸ್ ಯೋಜನೆಗೆ ಆಡಳಿತ ಮಂಡಳಿಯ ವಂತಿಗೆಯನ್ನು ಸರ್ಕಾರವೇ ಭರಿಸಬೇಕು ಮತ್ತು ಕಾಲ್ಪನಿಕ ವೇತನ ಜಾರಿಗೊಳಿಸಬೇಕು. 2006ರ ಏಪ್ರಿಲ್‌ಗೂ ಮುನ್ನ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರ ಹಿಂದಿನ ಸೇವೆಯನ್ನೂ ಪರಿಗಣಿಸಿ ಹಳೆ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಗಳು.

ಜ್ಯೋತಿ ಸಂಜೀವಿನಿ ಹಾಗೂ ಇತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯ ಇಲ್ಲದೆ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ನೀಡಬೇಕು ಎಂಬ ಬೇಡಿಕೆಯೂ ಸೇರಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಹನುಮಂತಪ್ಪ ತಿಳಿಸಿದರು.

ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ ಅ.10 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದೇವೆ.ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಆರ್.ಹನುಮೇಶ್, ಉಪಾಧ್ಯಕ್ಷ ಪಿ.ಡಿ.ರವಿ, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಟಾಚಲ, ಕಾರ್ಯಾಧ್ಯಕ್ಷ ಸಿ.ಎಂ.ಶಶಿಧರ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷ ಜೆ.ಧರ್ಮೇಂದ್ರ ಪ್ರಸಾದ್, ಪದಾಧಿಕಾರಿಗಳಾದ ನರೇಶ್, ಗಜೇಂದ್ರ ಇದ್ದರು.

ಹಿಂದಿನ ಲೇಖನಎಸ್.ಸಿ – ಎಸ್.ಟಿ ಮೀಸಲಾತಿ ಹೆಚ್ಚಳ: ನ್ಯಾ.ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿ ಯಥಾವತ್ತಾಗಿ ಒಪ್ಪಿಕೊಳ್ಳಲು ನಿರ್ಧಾರ
ಮುಂದಿನ ಲೇಖನದೇವರನ್ನು ಪೂಜಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ: ಮುಚ್ಚಿರುವ ಮಧುರೈ ದೇವಸ್ಥಾನದ ಕುರಿತು ಮದ್ರಾಸ್ ಹೈಕೋರ್ಟ್