ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೆಲ್ಲದರ ಮಧ್ಯೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
5 ಐಎಎಸ್ ಅಧಿಕಾರಿಗಳ ವರ್ಗಾವಣೆ
ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
ಭರತ್ ಎಸ್: ಸಿಇಒ, ಜಿ.ಪಂ. ಗದಗ ವರ್ಗಾವಣೆ ಮಾಡಲಾಗಿದೆ.
ಇತ್ತೀಚೆಗೆ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.
ನಾಲ್ವರು ಐಪಿಎಸ್ ವರ್ಗಾವಣೆ
ಫೆಬ್ರುವರಿ 1 ರಂದು ಅಷ್ಟೇ ನಾಲ್ವರು ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿತ್ತು.














