ಮನೆ ಆರೋಗ್ಯ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

0

ಬೆಂಗಳೂರು: ಕೊರೊನಾ ವೈರಸ್ ​​ನ ಜೆಎನ್​​1 ರೂಪಾಂತರಿಯಿಂದಾಗಿ  ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಇಲಾಖೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ಮಾರ್ಗಸೂಚಿಯಲ್ಲಿ ಆರೋಗ್ಯ ಇಲಾಖೆ ತಿಳಿಸಿದೆ.

ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆ ಹಾಗೂ ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ ನೀಡಲಾಗಿದೆ.

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.