ಮನೆ ಕಾನೂನು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

0

ನವದೆಹಲಿ: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ.

Join Our Whatsapp Group

ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್ ​ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್​ ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿ ಮಂಡಿಸಿದ್ದರು. ಪ್ರಜ್ವಲ್​ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಪ್ರಜ್ವಲ್​ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಈ ವೇಳೆ ನನಗೆ ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹೀಗಾಗಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಮುಕುಲ್ ರೋಹ್ಟಗಿ ವಾದ ಒಪ್ಪದೆ. ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ ಎಂದು ಅರ್ಜಿ ವಜಾಗೊಳಿಸಿತು.

ಆಗ, ಮುಕುಲ್ ರೋಹ್ಟಗಿ ಅವರು 6 ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೆ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ನಾವೇನು ಹೇಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.