ಈ ಹಿಂದೆ ‘ಜೋಕಾಲಿ’ ಮತ್ತು ‘ರಾಜಹಂಸ’ ಸಿನಿಮಾಗಳಲ್ಲಿ ನಾಯಕನಾಗಿದ್ದ ಗೌರಿ ಶಂಕರ್ ‘ಕೆರೆಬೇಟೆ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಸಕ್ರಿಯರಾಗಿದ್ದು, ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಬಿಡುಗಡೆಗೊಂಡಿದೆ.
ಮಲೆನಾಡಿನ ಮೀನುಗಾರಿಕೆ ಕಥೆಯನ್ನು ಹೊಂದಿರುವ ಚಿತ್ರಕ್ಕೆ 10 ವರ್ಷಗಳಿಂದ ಚಿತ್ರರಂಗದಲ್ಲಿ ಸಹ ನಿರ್ದೇಶಕರಾಗಿರುವ ರಾಜ್ ಗುರು ಆ್ಯಕ್ಷನ್ ಕಟ್ ಹೇಳಿದ್ದಾರೆ.
ಜೈ ಶಂಕರ್ ಪಟೇಲ್ ಮತ್ತು ಗೌರಿ ಶಂಕರ್ ‘ಜನಮನ ಸಿನಿಮಾ’ ಬ್ಯಾನರ್ ಮೂಲಕ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಅಪ್ಪಟ ಮಲೆನಾಡ ಸೊಗಡಿನ ಕಥೆ. ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮುಂದಿನ ವರ್ಷ ಚಿತ್ರ ತೆರೆಗೆ ಬರಲಿದೆ. ಸಿಗಂದೂರು ಮತ್ತು ಸೊರಬ ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ’ ಎನ್ನುತ್ತಾರೆ ಗೌರಿಶಂಕರ್.
ಗಗನ್ ಬಡೇರಿಯ ಸಂಗೀತ, ಕೀರ್ತನ್ ಪೂಜಾರಿ ಛಾಯಾಗ್ರಹಣ ಚಿತ್ರಕ್ಕಿದೆ.
Saval TV on YouTube