ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ನಡೆದಿದೆ.
ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಮೃತರು.
ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.