ಮನೆ ಸುದ್ದಿ ಜಾಲ ಆಪ್ ನಾಯಕಿಯ ಕಾರನ್ನೇ  ಧ್ವಂಸದ ಆರೋಪ : ಬೈರತಿ ಬಸವರಾಜ್​ಗೆ ಎದುರಾದ ಸಂಕಷ್ಟ

ಆಪ್ ನಾಯಕಿಯ ಕಾರನ್ನೇ  ಧ್ವಂಸದ ಆರೋಪ : ಬೈರತಿ ಬಸವರಾಜ್​ಗೆ ಎದುರಾದ ಸಂಕಷ್ಟ

0

ಬೆಂಗಳೂರು ಸೋಮವಾರ (ಮೇ 04)  ಬಿಕ್ಲು ಶಿವು ಕೊಲೆ ಕೇಸ್‌ ಪ್ರಕರಣದ ತನಿಖೆಯನ್ನು  ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್‌  ಅವರಿಗೆ ಈಗ ಇನ್ನೊಂದು ಹೊಸ ಸಮಸ್ಯೆ ಎದುರಾಗಿದೆ ಎನ್ನಬಹುದು. ಈ ಹಿಂದೆ ಅವರು ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಜೈಲು ರುಚಿ ನೋಡಿದ ಬಳಿಕ ಇದೀಗ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಬಿಕ್ಲು ಶಿವ ಕೊಲೆ ಕೇಸ್​ನ ಪ್ರಕರಣದಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ ನ್ಯಾಯಾಂಗ ಬಂಧನದಿಂದ ಜಾಮೀನಿನಲ್ಲಿ ಹೊರಬಂತ ನಂತರ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ ಎನ್ನಲಾಗಿದೆ. ಇದರ ಪ್ರಕಾರ ಕಳೆದ ತಿಂಗಳು ಕೂಡ ಶಾಸಕರು ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ಸುಮಾರು 50 ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ವಾರ್ಡ್‌ನಾದ್ಯಂತ ಹಾಕಿಸಿದ್ದರು ಎಂದು ಕಿಡಿಕಾರಿದ ಆಪ್ ನಾಯಕಿ . ಆರಂಭದಲ್ಲಿ ಈ ಬಗ್ಗೆ ದೂರು ನೀಡಲು ಹೋದಾಗ ಎಚ್‌ಎಎಲ್ ಪೊಲೀಸರು ಶಾಸಕರ ಒತ್ತಡಕ್ಕೆ ಮಣಿದು ದೂರು ಸ್ವೀಕರಿಸಲು ನಿರಾಕರಿಸಿದ್ದರು, ನಂತರ ಲೋಕಾಯುಕ್ತರ ಮೊರೆ ಹೋದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ದೂರಿದ್ದಾರೆ ತಿಳಿಸಿದ್ದಾರೆ.

ಇದರಿಂದ ಮುಂಬರುವ ಜಿಬಿಎ ಚುನಾವಣೆಗಳಿಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ಕಾರಣಕ್ಕಾಗಿಯೇ ತನ್ನ ಮೇಲೆ ಇಂತಹ ಹಲ್ಲೆ ನಡೆಯುತ್ತಿದೆ ಮತ್ತು ನನಗೆ ಬೆದರಿಕೆಗಳು ಬರುತ್ತಿವೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ತನಗೆ ಏನಾದರೂ ತೊಂದರೆಯಾದರೆ ಅದಕ್ಕೆ ನೇರವಾಗಿ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಅವರು ಎಚ್ಚರಿಸಿದ್ದಾರೆ. ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಮತ್ತು ಈ ಘಟನೆಯು ಕೆ.ಆರ್. ಪುರಂನಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಬಹುದು.

ಬಿಕ್ಲು ಶಿವ ಕೇಸ್​ನಲ್ಲಿ 2025ರ ಜುಲೈ 15ರಂದು ಬೆಂಗಳೂರಿನ ಭಾರತಿನಗರದಲ್ಲಿ ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕಿತ್ತಗನೂರಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್‌ ಅವರನ್ನು 5ನೇ ಆರೋಪಿಯನ್ನಾಗಿ (A5) ಸೇರಿಸಲಾಗಿತ್ತು. ಅವರು ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.ಜಾಮೀನು ವಜಾಗೊಂಡ ಬಳಿಕ, 2026ರ ಫೆಬ್ರವರಿಯಲ್ಲಿ ಸಿಐಡಿ ಪೊಲೀಸರು ಇವರನ್ನು ಬಂಧಿಸಿದ್ದರು. ಸುಮಾರು 28 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಇವರಿಗೆ 2026ರ ಮಾರ್ಚ್ 12ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದೆಲ್ಲದರ ಬಳಿಕ ಮತ್ತೊಮ್ಮೆ ಆಪ್ ನಾಯಕಿ ಮೇಲೆ ಹಲ್ಲೆ ಮತ್ತು ಬೆದರಿಕೆ ಕೇಸ್​ನಲ್ಲಿ ಅವರ ಹೆಸರು ಕೇಳಿಬಂದಿರುವುದು ಶಾಸಕನಿಗೆ ಇದೊಂದು ಸಂಕಷ್ಟ ಎದುರಾಗಿದೆ ಎನ್ನಬಹುದು.