ಮೈಸೂರು: ಕೂಸಿನಮನೆ ನಿರ್ವಹಣೆ, ಕೇರ್ ಟೇಕರ್ಸ್ ಗಳು ನಿರ್ವಹಿಸಬೇಕಾದ ಜವಾಬ್ದಾರಿಗಳು ಹಾಗೂ ಕೂಸಿನ ಮನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿ ನರಸೀಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ.ಸಿ ಅವರು ತಿಳಿಸಿದರು.
ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೂಸಿನ ಮನೆಯ ಆರೈಕೆದಾರರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೈಕೆದಾರರು ಏಳು ದಿನಗಳ ತರಬೇತಿ ಪಡೆದು ಉತ್ತಮವಾಗಿ ಕೆಲಸ ಮಾಡಬೇಕು. ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೂಸಿನ ಮನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುವಂತೆ ನೋಡಿಕೊಳ್ಳಬೇಕು ಹಾಗೂ ಬಹಳ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ಕೂಸಿನ ಮನೆಯು ವರವಾಗಿದ್ದು ತಮ್ಮ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಟ್ಟು ತಾವು ಕೆಲಸಕ್ಕೆ ಹೋಗಲು ಸಹಕಾರಿಯಾಗುತ್ತದೆ. ಕೂಸಿನ ಮನೆಯಲ್ಲಿ ಮಕ್ಕಳನ್ನು ನಿಮ್ಮ ಸ್ವಂತ ಮಕ್ಕಳಂತೆ ಪಾಲನೆ ಪೋಷಣೆ ಮಾಡಿ ಯಾವುದೇ ತೊಂದರೆಯಾಗದoತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು
ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಬೊಮೆಲೆ ರೇಖಾ, ಮೇಲ್ವಿಚಾರಕಿ ಶೈಲಾ ಎಫ್ ಸುಣಗಾರ್ ಹಾಗೂ ತಾಲ್ಲೂಕು ಐ ಇ ಸಿ ಸಂಯೋಜಕ ಹರ್ಷಿತ್. ಬಿ ಹಾಜರಿದ್ದರು.