ಹಾವೇರಿ : ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕಂಠಿಬಿರೇಶ್ವರ ನಗರದಲ್ಲಿ ನಡೆದಿದೆ.
ಶಾಸಕ ಪ್ರಕಾಶ್ ಕೋಳಿವಾಡ ಅಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಹಳ್ಳಳಿ ಅವರ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಟ್ರಿಜೋರಿಯಲ್ಲಿಟ್ಟಿದ್ದ, ಚಿನ್ನಾಭರಣ ಸೇರಿದಂತೆ ನಾಲ್ಕುವರೆ ಲಕ್ಷ ರೂ. ನಗದನ್ನು ದೋಚಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಶ್ರೀನಿವಾಸ ಅವರು ಬೆಂಗಳೂರಿಗೆ ತೆರಳಿದ್ದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಈ ಘಟನಾ ಸ್ಥಳಕ್ಕೆ ರಾಣೇಬೆನ್ನೂರು ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















